ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಟೇಕಾಫ್ ವೇಳೆ ಅಮೆರಿಕದ ಸರಕು ಸಾಗಣೆ ವಿಮಾನ ಪತನ – ಮೂವರು ದುರ್ಮರಣ – News Kadaba

ಟೇಕಾಫ್ ವೇಳೆ ಅಮೆರಿಕದ ಸರಕು ಸಾಗಣೆ ವಿಮಾನ ಪತನ – ಮೂವರು ದುರ್ಮರಣ

(ನ್ಯೂಸ್‌ ಕಡಬ) newskadaba.com,  ನ.05: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ ಮನೆ ಕಳೆದುಕೊಂಡವರಿಗೆ ಆಶ್ರಯ ನೀಡುವಂತೆ ಸೂಚಿಸಿದ್ದಾರೆ.

ಹೊನೊಲುಗೆ ತೆರಳುತ್ತಿದ್ದ ಮೆಕ್‌ಡೊನೆಲ್ ಡೌಗ್ಲಾಸ್ ಎಂಡಿ-11ಎಫ್ ವಿಮಾನವಾದ (Douglas MD-11 airplane) ಯುಪಿಎಸ್ ಫ್ಲೈಟ್-2976, ನವೆಂಬರ್‌ 4ರ ಸಂಜೆ ಸಂಜೆ 5:15ಕ್ಕೆ (ಸ್ಥಳೀಯ ಕಾಲಮಾನ) ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ ಎಂದು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ವರದಿ ಮಾಡಿದೆ.

ದುರಂತದ ವಿಡಿಯೋಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಮೊದಲು ಎಡ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ನಂತರ ಇಡೀ ವಿಮಾನಕ್ಕೆ ಬೆಂಕಿ ವ್ಯಾಪಿಸಿದ್ದು, ನೆಲಕ್ಕಪ್ಪಳಿಸಿದೆ, ರನ್‌ವೇನಲ್ಲೇ ಉಜ್ಜಿಕೊಂಡು ಸ್ವಲ್ಪದೂರ ಮುಂದಕ್ಕೆ ಹೋಗಿದೆ. ಇದರಿಂದ ರನ್‌ವೇಯಿಂದಾಚೆಗಿದ್ದ ಕಟ್ಟಗಳಿಗೂ ಭಾರೀ ಹಾನಿಯಾಗಿದೆ.

ಲೂಯಿಸ್‌ವಿಲ್ಲೆಯಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಕೆಂಟುಕಿ ಗವರ್ನರ್ ಆಂಡಿ ಬೆಶಿಯರ್ ತಿಳಿಸಿದ್ದಾರೆ. ಇದು ತಕ್ಷಣದ ಮಾಹಿತಿಯಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

Scroll to Top