(ನ್ಯೂಸ್ ಕಡಬ) newskadaba.com, ನ.05: ರಾಜ್ಯದಲ್ಲಿ ಕಳೆದೊಂದು ವಾರದಿಂದ
ವರುಣನ ಆರ್ಭಟ ಕಡಿಮೆಯಾಗಿದ್ದು, ಆದರೆ ಮುಂದಿನ 3 ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ.
ಇಂದು (ನ. 5) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.












