ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಭೇಟಿ ಮಾಡಲಿರುವ ಪ್ರಧಾನಿ ಮೋದಿ



(ನ್ಯೂಸ್‌ ಕಡಬ) newskadaba.com,  ನ.05:  ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ನ.5) ಭೇಟಿಯಾಗಿ ಅಭಿನಂದಿಸಲಿದ್ದಾರೆ.





ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ.






ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ.

2025ರ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿತು. 299ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವನ್ನು 45.3 ಓವರ್‌ಗಳಲ್ಲಿ 246ರನ್‌ಗೆ ಆಲೌಟ್ ಮಾಡಿತು. ಚೊಚ್ಚಲ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ತಂಡಕ್ಕೆ ಪ್ರಧಾನಿ ಮೋದಿ ಶುಭಹಾರೈಸಿದ್ದರು.

error: Content is protected !!
Scroll to Top