(ನ್ಯೂಸ್ ಕಡಬ) newskadaba.com, ನ.06: ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ.
ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ.
ಬಾಲಕನ ಬೊಬ್ಬೆ ಕೇಳಿದ ತಾಯಿ ತಕ್ಷಣ ಮನೆಯಿಂದ ಹೊರಗೆ ಓಡಿ ಬಂದು ಮಗನನ್ನು ರಕ್ಷಿಸಿದ್ದಾರೆ. ತಕ್ಷಣವೇ ಬಾಲಕನನ್ನು ಬಜ್ಪೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ದುರ್ಗ ಸಂಜೀವಿನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ








