ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ



(ನ್ಯೂಸ್ಕಡಬ) newskadaba.com,  ನ.07 ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್‌ ನೀಡಿದ್ದಾರೆ. ಗೃಹಲಕ್ಷ್ಮಿ ಸೊಸೈಟಿಯಿಂದ 3 ಲಕ್ಷ ರೂ.ವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.





ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ ಬುಧವಾರ ರಾಜ್ಯಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು.






ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲೇ ಬ್ಯಾಂಕ್ ಜನಮನ್ನಣೆ ಗಳಿಸಲಿ

ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

error: Content is protected !!
Scroll to Top