ಮೈಸೂರು: ಕೆಪಿಸಿಸಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ



(ನ್ಯೂಸ್ಕಡಬ) newskadaba.com,  ನ.07 ಮೈಸೂರು: ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮಾಜಿ ಮೇಯರ್ ಬಿ.ಕೆ.ಪ್ರಕಾಶ್ ಅವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು.





ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ ಕೆಪಿಸಿಸಿ ಸದಸ್ಯರಾಗಿ ನಿಯೋಜನೆಗೊಂಡಿರುವ ನೇಮಕಾತಿ ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಆರ್.ಮೂರ್ತಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಯುತವಾಗಿದೆ. ಪಕ್ಷದ ಪ್ರಮುಖರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ.






ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಅಭಿವೃದ್ಧಿಯಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ.ಮಾಜಿ ಮೇಯರ್ ಎಚ್.ಎನ್.ಶ್ರೀಕಂಠಯ್ಯ, ಟಿ.ಬಿ.ಚಿಕ್ಕಣ್ಣ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯರಾದ ಡಿ.ನಾಗಭೂಷಣ್, ಕೆ.ವಿ.ಮಲ್ಲೇಶ್, ಕೆಪಿಸಿಸಿ ಸಂಯೋಜಕ ಎನ್.ಭಾಸ್ಕರ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರ್ ಎಲ್.ಗೌಡ, ಈಶ್ವರ್ ಡಿ.ಚಕ್ಕಡಿ, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಆರ್.ನಾಗೇಶ್, ಡಾ.ಸುಜಾತರಾವ್, ಎಂ.ಕೆ.ಅಶೋಕ, ಕೇಶವ ಮತ್ತಿತರರು ಹಾಜರಿದ್ದರು.

error: Content is protected !!
Scroll to Top