ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ



(ನ್ಯೂಸ್ಕಡಬ) newskadaba.com,  ನ.08 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ನೀಡಿದ ನೆಪದಲ್ಲಿ ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.





ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ(ನ.07) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಭೂತದಹಿಸಿ ಕಿಡಿಕಾರಿದರು.






ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ 52 ಸಾವಿರ ಕೋಟಿ ರು. ಅನುದಾನ ನೀಡುತ್ತಿದ್ದರೂ4.09 ಲಕ್ಷ ಕೋಟಿ ರು. ಮೊತ್ತದ ಆಯವ್ಯಯದ ಹಣವೆಲ್ಲವೂ ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಜನರನ್ನು ನಂಬಿಸಿ ಮೋಸ ಮಾಡುತ್ತಿದೆ. ಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿಗೆ ತಿಲಾಂಜಲಿ ಇಟ್ಟು ದರ ಏರಿಕೆ, ಬೆಲೆ ಹೆಚ್ಚಳದ ಮೂಲಕ ಲಕ್ಷಾಂತರ ಕೋಟಿ ರು. ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿದರು.

 

 

error: Content is protected !!
Scroll to Top