ಇಂದಿನ ಹವಮಾನ ವರದಿ



(ನ್ಯೂಸ್‌ ಕಡಬ) newskadaba.com,  ನ.08: ರಾಜ್ಯದ ಬಹುತೇಕ ಕಡೆ ಶುಕ್ರವಾರ ಒಣ ಹವೆ ಕಂಡುಬಂದಿತ್ತು. ಇಂದು (ನ.8) ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.






ನ.9ರಿಂದ 11ರವರೆಗೆ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಬಳಿಕ ನ.12ರಂದು ರಾಮನಗರ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

error: Content is protected !!
Scroll to Top