(ನ್ಯೂಸ್ ಕಡಬ) newskadaba.com, ನ.08 ಬೆಂಗಳೂರು: ಪಿಜಿ ಆಯುಷ್ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂಜೆ 4 ರೊಳಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ನೋಂದಣಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ 2,000 ಇದ್ದು (ರೂ 1,000 ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ), ಇದನ್ನು ನ.10ರ ಸಂಜೆ 6 ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವೇಳಾಪಟ್ಟಿ, ದಾಖಲಾತಿ ಪರಿಶೀಲನೆ, ಸಲ್ಲಿಸಬೇಕಾದ ಮೂಲ ದಾಖಲಾತಿಗಳು ಮತ್ತಿತರ ಮಾಹಿತಿಯನ್ನು http://kea.kar.nic.in ನಲ್ಲಿ ಗಮನಿಸಬಹುದು. ಎಐಎಪಿಜಿಇಟಿ-25ರ ಮಾಹಿತಿ ಪುಸ್ತಕದಲ್ಲಿ ನೀಡಿರುವ ಅರ್ಹತಾ ಷರತ್ತುಗಳು ಹಾಗೂ ಇನ್ನಿತರ ಮಾಹಿತಿಯನ್ನೂ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿದ್ದಾರೆ…












