(ನ್ಯೂಸ್ ಕಡಬ) newskadaba.com, ನ.08: ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಪ್ರತಿ ಕ್ವಿಂಟಾಲ್ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪಿ ಎಸ್ ಐ ಆರ್ ವಿ ಪಾಟೀಲ್ ನೀಡಿದ ದೂರಿನ ಅನ್ವಯ 11 ಆರೋಪಿಗಳು ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರತಿಭಟನೆಯ ವೇಳೆ ಪೊಲೀಸರನ್ನು ಕೊಲೆ ಮಾಡುವ ಉದ್ದೇಶದಿಂದ ಕಲ್ಲುತೂರಾಟ ಮಾಡಿ ಪೊಲೀಸರನ್ನು ಒದ್ದು ಹಲ್ಲೆ ಮಾಡಿದ್ದಾರೆ ತೀವ್ರ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ವಿರುದ್ಧ ಬಿಎನ್ಎಸ್ ಕಾಯ್ದೆಯ ಅಡಿ 189(2), 191(2), 191(3), 285, 132, 121(1), 121(2), 109, 324, 194 ಮತ್ತು ಸಾರ್ವಜನಿಕ ಆಸ್ತಿ ಹಾನಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಘಟನೆಯಲ್ಲಿ 100 ಪೊಲೀಸ್ ಸಿಬ್ಬಂದಿಗಳಿಗೆ ಗಾಯಗಳಾಗಿವೆ. 2 ಪೊಲೀಸ್ ವ್ಯಾನ್ ಹಾಗೂ ಬಸ್ಗಳಿಗೆ ಸಂಪೂರ್ಣ ಹಾನಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ












