(ನ್ಯೂಸ್ ಕಡಬ) newskadaba.com ಕಡಬ, ಮೇ.01. ಇಂಡಿಕಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೋರ್ವಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪದ ಗರ್ಗಾಸ್ ಪಾಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೆಂಗಳೂರಿನಿಂದ ಆಗಮಿಸಿ ಧರ್ಮಸ್ಥಳ ದೇವರ ದರ್ಶನ ಮುಗಿಸಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳ ಪೇರಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಬಾಲಕಿ ಗಂಭೀರ ಗಾಯಗೊಂಡಿದ್ದು, ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಬಾಲಕಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.