ಬಿಳಿನೆಲೆ: ಇನ್ನೋವಾ ಹಾಗೂ ಇಂಡಿಕಾ ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ► ಮೂವರು ಮಹಿಳೆಯರು ಸೇರಿ ಐವರು ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಮೇ.01. ಇನ್ನೋವಾ ಹಾಗೂ ಇಂಡಿಕಾ ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ಐ ಸಮೀಪ ಮಂಗಳವಾರ ಸಂಜೆ ನಡೆದಿದೆ.







ತಮಿಳುನಾಡು ಮೂಲದವರು ಮುರುಡೇಶ್ವರ, ಕೊಲ್ಲೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಯಾತ್ರೆ ಮುಗಿಸಿ ಬಾಡಿಗೆ ಇನ್ನೋವಾದಲ್ಲಿ ರೈಲ್ವೇ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಂಡಿಕಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ‌. ಘಟನೆಯಲ್ಲಿ ಇಂಡಿಕಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಡ್ಯ ಮೂಲದ ಒಂದೇ ಕುಟುಂಬದ ಲಕ್ಷ್ಮೀ(48), ಲಿಖಿತಾ(22), ಕೀರ್ತನಾ(13), ಮನೋಜ್ (19), ಪ್ರತಾಪ್(35) ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಡಬ, ಆಲಂಕಾರಿನ 108 ಆಂಬ್ಯುಲೆನ್ಸ್ ಹಾಗೂ ಕಡಬ ಸಮುದಾಯ ಆಸ್ಪತ್ರೆಯ ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top