ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದೆಹಲಿ ಸ್ಫೋಟ: ‘ದುರಂತಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡಲ್ಲ’- ರಾಜನಾಥ್ ಸಿಂಗ್ – News Kadaba

ದೆಹಲಿ ಸ್ಫೋಟ: ‘ದುರಂತಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡಲ್ಲ’- ರಾಜನಾಥ್ ಸಿಂಗ್

(ನ್ಯೂಸ್‌ ಕಡಬ) newskadaba.com,  ನ.11, ದೆಹಲಿ ಸ್ಫೋಟದ ಬಗ್ಗೆ ಭಾರತದ ಪ್ರಮುಖ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

“ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ನನ್ನ ಸಹ ನಾಗರಿಕರಿಗೆ ಭರವಸೆ ನೀಡಲು ನಾನು ಬಯಸುತ್ತೇನೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಹೇಳಿದರು.

“ಈ ದುರಂತಕ್ಕೆ ಕಾರಣರಾದವರನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸಲಾಗುವುದು ಮತ್ತು ಯಾವುದೇ ಸಂದರ್ಭದಲ್ಲೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ರಾಷ್ಟ್ರಕ್ಕೆ ದೃಢವಾಗಿ ಭರವಸೆ ನೀಡಲು ಬಯಸುತ್ತೇನೆ” ಎಂದರು. ಜೊತೆಗೆ ಮೃತರ ಕುಟುಂಬಗಳಿಗೆ ರಕ್ಷಣಾ ಸಚಿವರು ತಮ್ಮ ಸಂತಾಪ ಸೂಚಿಸಿದರು.

ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು. ಈ ದುರಂತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇನ್ನು ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಸ್ಫೋಟಕ್ಕೆ ಕಾರಣವೇನೆಂದು ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Scroll to Top