ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆ



(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಸ್ವಲ್ಪ ಪ್ರಮಾಣದಲ್ಲಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.





ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ.






ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

error: Content is protected !!
Scroll to Top