ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದ 4 ರೈಲು ನಿಲ್ದಾಣಗಳ ಹೆಸರು ಬದಲಿಸುವಂತೆ ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು – News Kadaba

ರಾಜ್ಯದ 4 ರೈಲು ನಿಲ್ದಾಣಗಳ ಹೆಸರು ಬದಲಿಸುವಂತೆ ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು

(ನ್ಯೂಸ್‌ ಕಡಬ) newskadaba.com,  ನ.13: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ ಪಾಟೀಲ್ ಅವರು ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಈ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರ ಈ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ.

Scroll to Top