(ನ್ಯೂಸ್ ಕಡಬ) newskadaba.com, ನ.13: ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳ ಮೂಲಕ ಪ್ರಪಂಚದಾದ್ಯಂತ ಕನ್ನಡ ಚಿತ್ರರಂಗದ ಹಿರಿಮೆಯನ್ನು ಹೆಚ್ಚಿಸಿದ ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ‘ಫಿಲಂಸ್ ಈಗ ಕ್ರೀಡಾ ಲೋಕ ಪ್ರವೇಶಿಸಲು ಸಜ್ಜಾಗಿದೆ. ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯನ್ನು ಖರೀದಿಸುವ ಮಾತುಗಳು ಕೇಳಿಬರುತ್ತಿವೆ.
ಮಾರುಕಟ್ಟೆಯಲ್ಲಿ 2 ಬಿಲಿಯನ್ ಮೌಲ್ಯ ಹೊಂದಿರುವ RCB
ಮೂಲಗಳ ಪ್ರಕಾರ ಸದ್ಯದ ಮಾರುಕಟ್ಟೆಯಲ್ಲಿ ಬರೊಬ್ಬರಿ 2 ಬಿಲಿಯನ್ ಮೌಲ್ಯ ಹೊಂದಿರುವ ತಂಡವನ್ನು ಮಾರಾಟ ಮಾಡಲು ಆರ್ ಸಿಬಿ ಫ್ರಾಂಚೈಸಿ ನಿರ್ಧರಿಸಿದೆ. ವಿಜಯ್ ಮಲ್ಯ ನಂತರ RCB ಮಾಲೀಕತ್ವ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ಪಾಲಾಗಿತ್ತು. ಈಗ USL ಹೊರಬರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹೊಸ ಮಾಲೀಕರ ಹುಡುಕಾಟ ಆರಂಭವಾಗಿದೆ. ಇದರಲ್ಲಿ ಹೊಂಬಾಳೆ ಫಿಲಂಸ್ನ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಹೆಸರೂ ಕೇಳಿಬರುತ್ತಿದೆ.
ಖರೀದಿ ರೇಸ್ ನಲ್ಲಿ ಇರುವವರು
ಶಿವಮೊಗ್ಗ ಮೂಲದ ಉದ್ಯಮಿ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಗ್ರೂಪ್ನ ರಂಜನ್ ರೈ ಅವರ ಹೆಸರುಗಳೂ ಸಹ ಸ್ಪರ್ಧೆಯಲ್ಲಿ ಇದ್ದರೂ, ಹೊಂಬಾಳೆ ಹೆಸರೇ ಮುಂಚೂಣಿಯಲ್ಲಿರುವುದಾಗಿ ವರದಿಯಾಗಿದೆ.












