ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು



(ನ್ಯೂಸ್ ಕಡಬ) newskadaba.com,  .13:  ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ ನೀರು ಹಂಚಿಕೆಯ ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಉದ್ದೇಶಕ್ಕಾಗಿ ರಚಿಸಲಾದ ತಜ್ಞರ ಸಮಿತಿ ನಿರ್ವಹಿಸುವುದು ಉತ್ತಮ ಎಂದು ಪುನರುಚ್ಚರಿಸಿದೆ.





ಕರ್ನಾಟಕದ ಮೇಕೆದಾಟು ಅಣೆಕಟ್ಟಿನ ವಿವರವಾದ ಯೋಜನಾ ವರದಿ (DPR) ನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಇತ್ತೀಚೆಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಅನುಮೋದನೆಗಳು ನ್ಯಾಯಾಂಗದಿಂದ ಬರಬೇಕಿರುವುದು ಅಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ದಿಂದ ಬರಬೇಕು ಎಂದು ಹೇಳಿದೆ.






ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು, ತಮಿಳುನಾಡಿನ ಮನವಿಯನ್ನು ತಪ್ಪಾಗಿ ಗ್ರಹಿಸಲಾಗಿದೆ, ರಾಜ್ಯವು ಆದೇಶವನ್ನು ಮೇಲ್ವಿಚಾರಣೆ ಮಾಡಲು ಅಧಿಕಾರ ಹೊಂದಿರುವ ತಜ್ಞರ ಸಮಿತಿಯನ್ನು ಸಂಪರ್ಕಿಸಬೇಕಾಗಿತ್ತು ಎಂದು ಹೇಳಿತು.

error: Content is protected !!
Scroll to Top