ನೆಲ್ಯಾಡಿ: ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.2. 2018ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಡಬ ತಾಲೂಕಿನ ನೆಲ್ಯಾಡಿಯ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಶೇ.96.22 ಫಲಿತಾಂಶ ಪಡೆದುಕೊಂಡಿದೆ.

ಪ್ರಸಕ್ತ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 159 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ ಒಟ್ಟು 153 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಲಾ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳು ಹಾಜರಾಗಿದ್ದು, 52 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗು ವಾಣಿಜ್ಯ ವಿಭಾಗದಲ್ಲಿ ಒಟ್ಟು 103 ಪರೀಕ್ಷೆ ಬರೆದಿದ್ದು ಈ ಪೈಕಿ 101 ಮಂದಿ ಪಾಸಾಗಿದ್ದಾರೆ. 13 ಮಂದಿ ವಿಶಿಷ್ಟ ಶ್ರೇಣಿ, 96 ಮಂದಿ ಪ್ರಥಮ ಶ್ರೇಣಿ, 37 ಮಂದಿ ದ್ವಿತೀಯ ಶ್ರೇಣಿ ಹಾಗು 07 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Also Read  ವೆನ್ ಲಾಕ್ ನಲ್ಲಿ ಶೀಘ್ರವೇ ಒಳರೋಗಿ ಸೇವೆ ➤ ಸಚಿವ ಕೋಟ

error: Content is protected !!
Scroll to Top