ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು :ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರ ಮರಣದಿಂದ ತೀವ್ರ ದುಃಖ ಉಂಟಾಗಿದೆ. ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಿಮ್ಮಕ್ಕ ಅವರ ಕೊನೇ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಮಾಡಬೇಕು ಎಂದು ಆ ಪತ್ರದಲ್ಲಿದೆ. ಈ ಕುರಿತು ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

Scroll to Top