ಬಂಟ್ವಾಳ: ಕಮರಿಗೆ ಉರುಳಿದ ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ► ಚಾಲಕ ಮೃತ್ಯು, ಕ್ಲೀನರ್ ಗೆ ಗಾಯ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ.03. ಕೆಂಪು ಕಲ್ಲು ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಕ್ಲೀನರ್ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪಚ್ಚಿನಡ್ಕ ಸಮೀಪದ ಕಲ್ಪನೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.







ಮೃತ ಚಾಲಕನನ್ನು ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಪುತ್ತುಮೋನು ಎಂಬವರ ಪುತ್ರ ಅಶ್ರಫ್ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕ್ಲೀನರ್ ಮಚ್ಚಿನಡ್ಕದ ಶೇಕಬ್ಬ ಬ್ಯಾರಿ ಎಂಬವರ ಪುತ್ರ ಅಬ್ದುಲ್ ಕರೀಂ(40) ಗಾಯಗೊಂಡಿದ್ದು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ ಕೆಂಪು ಕಲ್ಲುಗಳನ್ನು ಹೇರಿಕೊಂಡು ಪಚ್ಚಿನಡ್ಕದ ಕಲ್ಪಣೆಯಿಂ ಕೈಕಂಬ ಕಡೆಗೆ ತೆರಳುತ್ತಿದ್ದ ಲಾರಿ, ಪಚ್ಚಿನಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 15 ಅಡು ಆಳದ ಗುಂಡಿಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top