ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್ – News Kadaba

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.17 ಕಡಬ :ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪೊಲೀಸರಿಂದ ತಿಳಿದುಬಂದ ವಿವರಗಳ ಪ್ರಕಾರ, ಘಟನೆ ನವೆಂಬರ್ 13, 2025ರ ರಾತ್ರಿ ನಡೆದಿದೆ.

ಫಿರ್ಯಾದುದಾರರಾದ ಮಹಿಳೆ ತಮ್ಮ ಗಂಡ ಮತ್ತು ಮಕ್ಕಳೊಂದಿಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು, ಘಟನೆ ವೇಳೆ ಅವರು ಮನೆಯ ಹೊರಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಮಲಗಿಕೊಂಡಿದ್ದರು. ಅದೇ ವೇಳೆ, ಅಪ್ರತೀಕ್ಷಿತವಾಗಿ ಒಬ್ಬ ವ್ಯಕ್ತಿ ಬಂದು ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ……

ಘಟನೆಯ ದರ್ಜೆಯಲ್ಲಿ ಮಹಿಳೆ ಸಹಾಯಕ್ಕಾಗಿ ಕೂಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಗಂಡ ಹಾಗೂ ಮಕ್ಕಳು ಓಡಿ ಬಂದಿದ್ದಾರೆ. ಈ ವೇಳೆಯಲ್ಲಿ ಆರೋಪಿತನು ಸ್ಥಳೀಯ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ. ಆರೋಪಿತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಪರಾರಿಯಾಗುವ ಸಂದರ್ಭದಲ್ಲಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಸಂತ್ರಸ್ಥ ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ತನಿಖೆಯನ್ನು ಮುಂದುವರಿಸಿದ ಪೊಲೀಸರು, ನವೆಂಬರ್ 16, 2025 ರಂದು ಆರೋಪಿತ ಉಮೇಶ್ ಗೌಡ ಅವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಂತರ ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Scroll to Top