ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ – News Kadaba

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ನ.17: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ.

ಅಕ್ಟೋಬರ್ 15, 2025ರಂದು ಸಂಜೆ 5 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ, ಮೂಡಬಿದ್ರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸ್ರಿಗೆ ಲಭಿಸಿತು.

ತಕ್ಷಣ ನಡೆದ ದಾಳಿಯಲ್ಲಿ, ಆರೋಪಿಗಳಾದ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ವದ್, ಅಬ್ದುಲ್ ಮೊಹಮ್ಮದ್ ನಿಶಾಮ್ ಎಂಬ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಾಹನದಲ್ಲಿ ಒಟ್ಟು 3 ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ.

ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 178/2025 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

1ನೇ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ – ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 29 ಪ್ರಕರಣಗಳ ನಂತರ, ಇದು 30ನೇ ಪ್ರಕರಣವಾಗಿದ್ದು, 2ನೇ ಆರೋಪಿ ಮೊಹಮ್ಮದ್ ಅಶ್ವದ್ – ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ 1 ಪ್ರಕರಣ ದಾಖಲಾಗಿದ್ದು, ಇದು 2ನೇ ಪ್ರಕರಣವಾಗಿದೆ ಹಾಗೂ 3ನೇ ಆರೋಪಿ ಅಬ್ದುಲ್ ಮೊಹಮ್ಮದ್ ನಿಶಾಮ್ – ಇವರ ವಿರುದ್ಧ ಇದು ಮೊದಲ ಪ್ರಕರಣವಾಗಿದೆ.

ಆರೋಪಿಗಳ ಮೇಲೆ ಸಂಘಟಿತ ಅಪರಾಧ ಪ್ರಕರಣ ದಾಖಲಿಸಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆಯ ನಂತರ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ.

 

 

Scroll to Top