ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೈಸೂರು: ಉಪನ್ಯಾಸಕನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – News Kadaba

ಮೈಸೂರು: ಉಪನ್ಯಾಸಕನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

(ನ್ಯೂಸ್‌ ಕಡಬ) newskadaba.com,  ನ. 17 ಮೈಸೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಸೆಕ್ಷನ್ 126 (2) 75 (2) 351 (2) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾಕ್ರ್ಸ್ ಕೊಡುತ್ತೇನೆ, ಒಳ್ಳೆಯ ಕೆಲಸ ಕೊಡಿಸ್ತೇನೆ. ಹೊರಗೆ ಪಬ್‍ಗೆ ಹೋಗಿ ಮಜಾ ಮಾಡೋಣ ಬಾ ಅಂತ ಕರೆಯುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.

ಅಲ್ಲದೇ ಭರತ್‍ನ ಅಸಭ್ಯ ವರ್ತನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ದೂರು ನೀಡಿದ್ದಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಖಾಸಗಿ ಅಂಗಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದಾನೆ. ತಾನು ಹೇಳಿದಂತೆ ಕೇಳದಿದ್ರೆ ಫೇಲ್ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾನೆ.
ಹಾಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿ ಪೆÇಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾಳೆ. ಕಾಮುಕ ಉಪನ್ಯಾಸಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Scroll to Top