(ನ್ಯೂಸ್ ಕಡಬ) newskadaba.com, ನ. 17 ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ (PM Kisan yojana) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ. 2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ – ಕಿಸಾನ್ ಅನ್ನು 2019ರ ಫೆಬ್ರವರಿ 24ರಂದು ಆರಂಭಿಸಲಾಯಿತು. ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ದೇಶದ 11 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 20 ಕಂತುಗಳಲ್ಲಿ ಒಟ್ಟು 3.70 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.ಈ ಹಣವು ರೈತರಿಗೆ ಕೃಷಿ ಪರಿಕರಗಳನ್ನು ಖರೀದಿಸಲು, ಮಕ್ಕಳ ಶಿಕ್ಷಣ, ವೈದ್ಯಕೀಯ ವೆಚ್ಚಗಳು ಮತ್ತು ಮದುವೆಯಂತಹ ಇತರ ಖರ್ಚುಗಳನ್ನು ನಿಭಾಯಿಸಲು ನೆರವಾಗಿದೆ.
ಈ ಕೇಂದ್ರ ಸರ್ಕಾರದ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತುರೈತರು ತಮ್ಮ ಸಮಸ್ಯೆಗಳನ್ನು ನೇರವಾಗಿ ಪೋರ್ಟಲ್‌ನಲ್ಲಿ ನೋಂದಾಯಿಸಬಹುದು ಮತ್ತು ತ್ವರಿತ ಮಾಹಿತಿ ಮತ್ತು ಪರಿಹಾರಗಳನ್ನು ಪಡೆಯಬಹುದು.2019ರಲ್ಲಿ ‘ಅಂತಾರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆ’ನಡೆಸಿದ ಅಧ್ಯಯನದ ಪ್ರಕಾರ, ಪಿಎಂ-ಕಿಸಾನ್ ಯೋಜನೆಯಡಿ ವಿತರಿಸಲಾದ ಹಣವು ಗ್ರಾಮೀಣ ಆರ್ಥಿಕ ಬೆಳವಣಿಗೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಿದೆ. ಇದು ರೈತರ ಮೇಲಿನ ಸಾಲದ ಹೊರೆಯನ್ನು ಕಡಿಮೆ ಮಾಡಲು ಮತ್ತು ಕೃಷಿ ಪರಿಕರಗಳಲ್ಲಿ ಹೂಡಿಕೆ ಹೆಚ್ಚಿಸಲು ಸಹಾಯ ಮಾಡಿದೆ ಎಂದು ಅಧ್ಯಯನ ತಿಳಿಸಿದೆ.










