ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು



(ನ್ಯೂಸ್‌ ಕಡಬ) newskadaba.com,  . 17  : ಮುಸಲ್ಮಾನರ ಪವಿತ್ರ ಯಾತ್ರಾ ಸ್ಥಳವಾದ ಮೆಕ್ಕಾದಲ್ಲಿ ಭಾರತೀಯ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ದುರಂತ ಘಟನೆ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೆಕ್ಕಾದಿಂದ ಮದೀನಾಗೆ ಸಾಗುತ್ತಿದ್ದ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.





ಮಧ್ಯರಾತ್ರಿ 01:30 ರ ಸುಮಾರಿಗೆ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಡಿದೆ. ತಕ್ಷಣವೇ, ಬೆಂಕಿ ಹೊತ್ತಿಕೊಂಡು ಬಸ್ ಕೆಲವೇ ಸೆಕೆಂಡುಗಳಲ್ಲಿ ಸುಟ್ಟುಕರಕಲಾಗಿದೆ. ಪರಿಣಾಮ ಈ ಅಪಘಾತದಲ್ಲಿ 42 ಭಾರತೀಯರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.






ಸೌದಿ ಅರೇಬಿಯಾದ ಮಾಧ್ಯಮ ವರದಿಗಳ ಪ್ರಕಾರ, ಮೆಕ್ಕಾ ಮದೀನ ಮಾರ್ಗ ಮಧ್ಯೆ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಲ್ಲಿ 20 ಮಹಿಳೆಯರು ಮತ್ತು 11 ಮಕ್ಕಳು ಸೇರಿದ್ದಾರೆ. ಈ ಅಪಘಾತದಲ್ಲಿ 42 ಜನರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದವರು ಎಂದು ವರದಿಗಳು ತಿಳಿಸಿವೆ. ಆದಾಗ್ಯೂ, ಸೌದಿ ಅಧಿಕಾರಿಗಳು ಅಪಘಾತದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

error: Content is protected !!
Scroll to Top