ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು – News Kadaba

ಮೆಕ್ಕಾ ಯಾತ್ರೆ ವೇಳೆ ಭಾರತೀಯರ ಬಸ್ ಅಪಘಾತ ; 42 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ. 17  : ಮುಸಲ್ಮಾನರ ಪವಿತ್ರ ಯಾತ್ರಾ ಸ್ಥಳವಾದ ಮೆಕ್ಕಾದಲ್ಲಿ ಭಾರತೀಯ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವ ದುರಂತ ಘಟನೆ ಸಂಭವಿಸಿದೆ. ಸೌದಿ ಅರೇಬಿಯಾದಲ್ಲಿ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೆಕ್ಕಾದಿಂದ ಮದೀನಾಗೆ ಸಾಗುತ್ತಿದ್ದ ಮಾರ್ಗದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಮಧ್ಯರಾತ್ರಿ 01:30 ರ ಸುಮಾರಿಗೆ ಭಾರತದಿಂದ ಮೆಕ್ಕಾಗೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆಡಿದೆ. ತಕ್ಷಣವೇ, ಬೆಂಕಿ ಹೊತ್ತಿಕೊಂಡು ಬಸ್ ಕೆಲವೇ ಸೆಕೆಂಡುಗಳಲ್ಲಿ ಸುಟ್ಟುಕರಕಲಾಗಿದೆ. ಪರಿಣಾಮ ಈ ಅಪಘಾತದಲ್ಲಿ 42 ಭಾರತೀಯರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸೌದಿ ಅರೇಬಿಯಾದ ಮಾಧ್ಯಮ ವರದಿಗಳ ಪ್ರಕಾರ, ಮೆಕ್ಕಾ ಮದೀನ ಮಾರ್ಗ ಮಧ್ಯೆ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಲ್ಲಿ 20 ಮಹಿಳೆಯರು ಮತ್ತು 11 ಮಕ್ಕಳು ಸೇರಿದ್ದಾರೆ. ಈ ಅಪಘಾತದಲ್ಲಿ 42 ಜನರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದವರು ಎಂದು ವರದಿಗಳು ತಿಳಿಸಿವೆ. ಆದಾಗ್ಯೂ, ಸೌದಿ ಅಧಿಕಾರಿಗಳು ಅಪಘಾತದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

Scroll to Top