ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ – News Kadaba

ಸೌದಿ ಅರೇಬಿಯಾ ಬಸ್ ದುರಂತ: ಸಂತಾಪ ಸೂಚಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.17: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

“ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಿ. ರಿಯಾದ್‌ನಲ್ಲಿರುವ ನಮ್ಮ ರಾಯಭಾರಿ ಕಚೇರಿ ಹಾಗೂ ಜೆಡ್ಡಾದ ರಾಯಭಾರಿ ಕಚೇರಿಯು ಎಲ್ಲ ರೀತಿಯ ಸಹಾಯ ಮಾಡಲಿದೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.

Scroll to Top