ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್ಲ್ಲಿ ವಜಾ

(ನ್ಯೂಸ್‌ ಕಡಬ) newskadaba.com,  ನ.18 : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿರುವ ನ್ಯಾಯಾಲಯ, ಮುಂದಿನ 15 ದಿನಗಳಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಬೇಕು. ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿದೆ.

Scroll to Top