“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್



(ನ್ಯೂಸ್‌ ಕಡಬ) newskadaba.com,  ನ.19  ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು…………





ನ.28ಕ್ಕೆ ನಾವು ಅಂಗನವಾಡಿ ಆರಂಭಿಸಿ 50 ವರ್ಷ ಆಯಿತು. ಕರ್ನಾಟಕದಿಂದಲೇ ಅಂಗನವಾಡಿ ಶುರುವಾಗಿದ್ದು. 1975ರಲ್ಲಿ ಇಂದಿರಾಗಾಂಧಿ ಅವರು ಮೈಸೂರಿನ ಟಿ.ನರಸೀಪುರದಲ್ಲಿ ಪ್ರಾರಂಭ ಮಾಡಿದರು. ಇದು ಕೇವಲ ಸಂಭ್ರಮವಲ್ಲ ಇಂದಿರಾಗಾಂಧಿ ಅವರ ಕನಸನ್ನು ಯಾವ ರೀತಿ ತೆಗೆದುಕೊಂಡು ಹೋಗಬೇಕು ಎಂಬುದನ್ನು ಘೋಷಣೆ ಮಾಡುತ್ತೇವೆ.






ಇನ್ನೂ ಇದೇ ವೇಳೆ ಅಕ್ಕಪಡೆ ಬಗ್ಗೆ ಮಾತನಾಡಿ, ಪೊಲೀಸ್ ಇಲಾಖೆ ಮತ್ತು ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸುತ್ತದೆ. ಪ್ರತಿ ಜಿಲ್ಲೆಯಲ್ಲೂ, ಅದರಲ್ಲೂ ನಗರ ಕೇಂದ್ರಗಳಲ್ಲಿ 10 ಮಹಿಳೆಯರು ಇರುತ್ತಾರೆ. ಅವರ ಜೊತೆಗೆ ಇಬ್ಬರು ಮಹಿಳಾ ಪೊಲೀಸರು ಇರುತ್ತಾರೆ.ಮನೆಯಲ್ಲಿ ದೌರ್ಜನ್ಯಕ್ಕೆ ಒಳಗಾದರೂ ಸುಮ್ಮನಿರುತ್ತಾರೆ. ಹೀಗಾಗಿ ಕಮಾಂಡೋ ಡ್ರೆಸ್ ಧರಿಸಿ ಅಕ್ಕಪಡೆ ಗಸ್ತು ತಿರುಗುತ್ತಾರೆ. ಪೊಲೀಸ್ ಇಲಾಖೆಯದ್ದೇ ನಂಬರ್ ಇದೆ, ಅದಕ್ಕೆ ಕರೆ ಮಾಡಿದರೆ ಅವರ ಹೆಸರನ್ನು ಗೌಪ್ಯವಾಗಿಟ್ಟು ಅವರ ರಕ್ಷಣೆಗೆ ಹೋಗುತ್ತೇವೆ ಎಂದು ಹೇಳಿದರು.

error: Content is protected !!
Scroll to Top