ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ



(ನ್ಯೂಸ್‌ ಕಡಬ) newskadaba.com,  ನ.19 ದೆಹಲಿ: ಉತ್ತಮ ಉದ್ಯೋಗ ಹೊಂದಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ಸರ್ಕಾರದ ಗುಪ್ತಚರ ಇಲಾಖೆ ಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ…..ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು,10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು …… ಉದ್ಯೋಗ ಸ್ಥಳ: ದೇಶಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ನವೆಂಬರ್‌ 22ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 14.







ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ






ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಒಟ್ಟು 4 ಹುದ್ದೆಗಳಿವೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವಯಸ್ಸು, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ರಿಕ್ರೂಟ್‌ಮೆಂಟ್‌ ಪ್ರೊಸೆಸಿಂಗ್‌ ಫೀಸ್‌ ಆಗಿ ಎಲ್ಲ ಅಭ್ಯರ್ಥಿಗಳು 550 ರೂ. ಪಾವತಿಸಬೇಕು. ಇನ್ನು ಪರೀಕ್ಷಾ ಶುಲ್ಕ ಎಸ್‌ಸಿ/ಎಸ್‌ಟಿ/ಮಹಿಳಾ/ಮಾಜಿ ಯೋಧರು/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಪಾವತಿಸಬೇಕಾಗಿಲ್ಲ. ಯುರ್‌/ಇಡಬ್ಲ್ಯುಎಸ್‌/ಒಬಿಸಿ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ 100 ರೂ. ಆನ್‌ಲೈನ್‌/ಆಫಲೈನ್‌ ಮೂಲಕ ಪಾವತಿಸಬೇಕು.

error: Content is protected !!
Scroll to Top