ಜಯನಗರ ಶಾಸಕ ಹೃದಯಾಘಾತದಿಂದ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.04. ಕಳೆದ ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜಯನಗರ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ ಕುಮಾರ್(60) ಶುಕ್ರವಾರ ಮುಂಜಾವ ನಿಧನರಾದರು.

ಗುರುವಾರದಂದು ಚುನಾವಣಾ ಪ್ರಚಾರದ ವೇಳೆ ಕುಸಿದು ಆಸ್ಪತ್ರೆಗೆ ದಾಖಲಾಗಿದ್ದ ಅವರ ಹೃದಯ ಬಡಿತ ಹಾಗೂ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ಜಯನಗರದ ಹಾಲಿ ಬಿಜೆಪಿ ಶಾಸಕರಾಗಿದ್ದ ವಿಜಯ ಕುಮಾರ್ ಅವರು ಜಯನಗರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Also Read  ಸುಳ್ಯ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ದಾಸ್ತಾನು ➤ 13 ಸಾವಿರ ರೂ. ಮೌಲ್ಯದ ಮದ್ಯ ವಶಕ್ಕೆ

error: Content is protected !!
Scroll to Top