(ನ್ಯೂಸ್ ಕಡಬ) newskadaba.com, ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್ ಮೂಲಕ ಕೂಡ ದಂಡ ಪಾವತಿಗೆ ಅವಕಾಶ ಕೊಡಲಾಗಿದೆ.
1991-92 ರಿಂದ 2019-20 ರ ಅವಧಿಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಕುರಿತು ದಂಡದ ಪಾವತಿಗೆ ಶೇ.50 ರಷ್ಟು ರಿಯಾಯಿತಿ ನ.21 ರಿಂದ ಡಿ.12 ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯ (ಸಾರಿಗೆ ಇಲಾಖೆ) ರಂಗಪ್ಪ ಕರಿಗಾರ ಆದೇಶದಲ್ಲಿ ಹೇಳಿದ್ದಾರೆ.












