(ನ್ಯೂಸ್ ಕಡಬ) newskadaba.com, ನ.21 ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್ ನ್ಯೂಸ್ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದ ಕಾರಣ, ಮತ್ತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ಈ ರಿಯಾಯಿತಿ ಸಿಗಲಿದೆ.












