ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ



(ನ್ಯೂಸ್ಕಡಬ) newskadaba.com,  .22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ.





ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರಿನ ಅತ್ಯಂತ ನಿರ್ಣಾಯಕ ರಸ್ತೆ ಕಾರಿಡಾರ್‌ಗಳಲ್ಲಿ ಒಂದಾದ ಸುರತ್ಕಲ್-ನಂತೂರು-ಬಿಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಕಾಯಕಲ್ಪ ದೊರೆಯುವ ಮೂಲಕ ಈ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.






ಮಂಗಳೂರಿನ ಈ ಬಂದರು ಸಂಪರ್ಕ ಹೆದ್ದಾರಿಯು ತೀರಾ ಹದಗೆಟ್ಟಿದ್ದು ಸರಕು ವಾಹನ ಹಾಗೂ ದೈನಂದಿನ ವಾಹನಗಳ ಓಡಾಟಕ್ಕೆ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸಂಸದ ಕ್ಯಾ. ಚೌಟ ಅವರು ಕಳೆದೊಂದು ವರ್ಷದಿಂದ ಸುರತ್ಕಲ್-ಮಂಗಳೂರು-ಬಿಸಿರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ಹಸ್ತಾಂತರಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿದ್ದರು. ಸುರತ್ಕಲ್- ನಂತೂರು-ಬಿಸಿ ರೋಡ್ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್(ಎನ್‌ಹೆಚ್‌ಎಲ್‌ಎಂಎಲ್) ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಎಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಹೆದ್ದಾರಿ ದುಸ್ಥಿತಿಗೆ ಪ್ರಮುಖ ಕಾರಣವಾಗಿತ್ತು. ಈ ವಿಚಾರವಾಗಿ ಗಂಭೀರವಾಗಿ ಪರಿಗಣಿಸಿದ್ದ ಕ್ಯಾ. ಚೌಟ ಅವರು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಮುಂದಾಗಿದ್ದರು.

 

error: Content is protected !!
Scroll to Top