ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – News Kadaba

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ.

ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರಿನ ಅತ್ಯಂತ ನಿರ್ಣಾಯಕ ರಸ್ತೆ ಕಾರಿಡಾರ್‌ಗಳಲ್ಲಿ ಒಂದಾದ ಸುರತ್ಕಲ್-ನಂತೂರು-ಬಿಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಕಾಯಕಲ್ಪ ದೊರೆಯುವ ಮೂಲಕ ಈ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.

ಮಂಗಳೂರಿನ ಈ ಬಂದರು ಸಂಪರ್ಕ ಹೆದ್ದಾರಿಯು ತೀರಾ ಹದಗೆಟ್ಟಿದ್ದು ಸರಕು ವಾಹನ ಹಾಗೂ ದೈನಂದಿನ ವಾಹನಗಳ ಓಡಾಟಕ್ಕೆ ಸಾಕಷ್ಟು ತೊಂದರೆ ಎದುರಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸಂಸದ ಕ್ಯಾ. ಚೌಟ ಅವರು ಕಳೆದೊಂದು ವರ್ಷದಿಂದ ಸುರತ್ಕಲ್-ಮಂಗಳೂರು-ಬಿಸಿರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ಹಸ್ತಾಂತರಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿದ್ದರು. ಸುರತ್ಕಲ್- ನಂತೂರು-ಬಿಸಿ ರೋಡ್ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್(ಎನ್‌ಹೆಚ್‌ಎಲ್‌ಎಂಎಲ್) ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಎಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಹೆದ್ದಾರಿ ದುಸ್ಥಿತಿಗೆ ಪ್ರಮುಖ ಕಾರಣವಾಗಿತ್ತು. ಈ ವಿಚಾರವಾಗಿ ಗಂಭೀರವಾಗಿ ಪರಿಗಣಿಸಿದ್ದ ಕ್ಯಾ. ಚೌಟ ಅವರು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಮುಂದಾಗಿದ್ದರು.

 

Scroll to Top