(ನ್ಯೂಸ್ ಕಡಬ) newskadaba.com, ನ.22: ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರಕಾರ ನೀಡಿದ್ದು, ಕಾರ್ಮಿಕ ಕಾನೂನುಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಎಲ್ಲಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು ಎಂಬ ಸೂಚನೆಗಳನ್ನು ಸೇರಿದಂತೆ, ವಿವಿಧ ವಲಯಗಳಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ಒಗ್ಗೂಡಿಸಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ವೇತನ ಸಂಹಿತೆ (2020), ಕೈಗಾರಿಕೆ ಸಂಬಂಧಗಳ ಸಂಹಿತೆ (2019), ಸಾಮಾಜಿಕ ಭದ್ರತಾ ಸಂಹಿತೆ (2020), ವೃತ್ತಿ ಸುರಕ್ಷತೆ, ಆರೋಗ್ಯ ಮತ್ತು ಕಾರ್ಯನಿರ್ವಹಣೆ ಸ್ಥಿತಿ ಸಂಹಿತೆ (2020) ಶುಕ್ರವಾರದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ತಿಳಿಸಿದೆ.












