ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಇಲಾಖೆ ವರದಿ ಮಾಡಿದೆ.





ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ.






ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

error: Content is protected !!
Scroll to Top