ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ



(ನ್ಯೂಸ್‌ ಕಡಬ) newskadaba.com,  ನ.24 ಮಂಗಳೂರು/ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.





ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ.






ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು, ಹಾಗೂ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮಂಗಳೂರು ನಗರ (ದೂ.ಸಂ.: 0824-2959809, -08251-230388, -0824-2263199, 08255-232465, ឯម្ម 08255-238080, -08256-295134, ಸುಳ್ಯ-08257-230239 ಸಂಪರ್ಕಿಸಬಹುದು.

ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ.ನಂ-204, ಮಣಿಪಾಲ ದೂ.ಸಂಖ್ಯೆ : 0820-2574978 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top