ಬಾಲಿವುಡ್‍ ಹಿರಿಯ ನಟ ಧರ್ಮೇಂದ್ರ ವಿಧಿವಶ.!



(ನ್ಯೂಸ್‌ ಕಡಬ) newskadaba.com,  ನ.24 ಮುಂಬೈ : ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‍ನ ಹೀ ಮ್ಯಾನ್, ಎವರ್‍ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಎಂದು ಜನಪ್ರಿಯರಾಗಿದ್ದ ಹಿರಿಯ ನಟ ಧರ್ಮೇಂದ್ರ (89) ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರ ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.





ರಾಷ್ಟ್ರಪರಿ ದ್ರೌಪತಿ ಮುರ್ಮು, ಉಪ ರಾಷ್ಟ್ರಪತಿ ರಾಧಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೇ ಡಿಸೆಂಬರ್ 8ರಂದು 90ನೇ ವಸಂತಕ್ಕೆ ಕಾಲಿಡಲಿರುವ ನಟ ಧರ್ಮೇಂದ್ರ ಅವರನ್ನು ಕಳೆದ ವಾರವಷ್ಟೇ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಲ್ಲದೇ ಏಪ್ರಿಲ್‍ನಲ್ಲಿ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.






ಧರ್ಮೇಂದ್ರ ಅವರು 2 ವಿವಾಹಗಳಾಗಿದ್ದವು. ಅವರ ಮೊದಲ ಪತ್ನಿ ಪ್ರಕಾಶ್ ಕೌರ್ ಅವರು ಯಾವಾಗಲೂ ಜನಸಂದಣಿಯಿಂದ ದೂರ ಉಳಿದಿದ್ದರು. ಅವರಿಗೆ ಸನ್ನಿ ದೇವಲ್, ಬಾಬಿ ದೇವಲ್, ವಿಜೇತಾ ಮತ್ತು ಅಜೀತಾ ಎಂಬ 4 ಮಕ್ಕಳಿದ್ದಾರೆ.

error: Content is protected !!
Scroll to Top