ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.25 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ……..

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Scroll to Top