ಮಂಗಳೂರು: ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ತರಬೇತಿ ಕಾರ್ಯಕ್ರಮ



(ನ್ಯೂಸ್‌ ಕಡಬ) newskadaba.com,  ನ.26 ಮಂಗಳೂರು-ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯಿದೆ ಕುರಿತು ಸಾಮಥ್ರ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ನಗರದ ಕದ್ರಿ ಜಿಲ್ಲಾ ಬಾಲಭವನದಲ್ಲಿ ನಡೆಯಿತು.





ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ, ಕಾರ್ಯಕ್ರಮದ ಭಾಗೀದಾರರೆಲ್ಲರೂ ದೌರ್ಜನ್ಯಕ್ಕೊಳಗಾದ ಮಹಿಳೆಯರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪಾತ್ರವಹಿಸುವವರು..






ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಸ್ಮಾನ್ ಉಪನಿರ್ದೇಶಕ ಮಾತನಾಡಿ, ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ ತಡೆಗಾಗಿ ಹಲವಾರು ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹೀಗೆ ಹಲವಾರು ಸಂಘ-ಸಂಸ್ಥೆಗಳು, ಇಲಾಖೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು..

ಕಾರ್ಯಕ್ರಮದ ಎರಡನೇ ಭಾಗದ ಅರಿವು ಕಾರ್ಯಾಗಾರವನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತಹ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ನ ಮನಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ.ಅರಿಣಾ ಯಡಿಯಾಳ್ ಮಾತನಾಡಿ, ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಂಬಂಧಿಸಿ ಕಾರ್ಯಕ್ರಮದ ಭಾಗೀದಾರರು ಅನುಭವಿಸುವ ಮಾನಸಿಕ ಒತ್ತಡಗಳ ಕುರಿತು ಮಾಹಿತಿ ನೀಡಿದರು.

error: Content is protected !!
Scroll to Top