ಇಂದಿನ ಹವಾಮಾನ ವರದಿ



(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ.





ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದ್ದು, ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 14 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!
Scroll to Top