ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ, ನ.29. ಕಡಬ ಠಾಣಾ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕಡಬ ಠಾಣೆಯಲ್ಲಿ ಕಳೆದ ಸುಮಾರು 2 ವರ್ಷಗಳಿಂದ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಅವರನ್ನು ವರ್ಗಾಯಿಸಿ ಅವರ ಸ್ಥಾನಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಂಬೂರಾಜ್ ಮಹಾಜನ್ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಶನಿವಾರದಂದು ನೂತನ ಸಬ್ ಇನ್ಸ್‌ಪೆಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Scroll to Top