ಶರತ್ ಮೇಲಿನ ಹಲ್ಲೆ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬಿ.ಸಿ.ರೋಡ್ ಚಲೋ ► ನಿಷೇಧಾಜ್ಞೆಯ ನಡುವೆಯೂ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯು ‘ಬಿ.ಸಿ.ರೋಡ್ ಚಲೋ’ ಘೋಷಿಸಿದ್ದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಹಿಂದೂ ಪರ ಸಂಘಟನೆಗಳ ಸದಸ್ಯರು ನಿಷೇಧಾಜ್ಞೆಯ ನಡುವೆಯೂ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿರುವುದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಬಿ.ಸಿ.ರೋಡಿನಲ್ಲಿನ ಅಂಗಡಿಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಡುತ್ತಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಲು ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಬಿ.ಸಿ.ರೋಡಿಗೆ ಆಗಮಿಸಿದ್ದಾರೆ. ಸಶಸ್ತ್ರ ಮೀಸಲು ಪಡೆ ಸೇರಿದಂತೆ 25ಕ್ಕೂ ಅಧಿಕ ಪೊಲೀಸ್ ಬಸ್‌ಗಳು ಬಿ.ಸಿ.ರೋಡಿನಲ್ಲಿ ಠಿಕಾಣಿ ಹೂಡಿದೆ. ಬಿ.ಸಿ.ರೋಡ್ ಮುಖ್ಯರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದ್ದಾರೆ. ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕರೆಸಲಾಗಿದೆ. ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರು ಇತ್ತೀಚೆಗೆ ಹಲ್ಲೆಗೊಳಗಾದ ಶರತ್ ಅವರ ಉದಯ ಲಾಂಡ್ರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘‘ಶರತ್ ಮೇಲಿನ ಹಲ್ಲೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಇನ್ನೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ. ನಿಜವಾದ ಅಪರಾಧಿಗಳನ್ನು ಹಿಡಿಯುವ ಪ್ರಯತ್ನ ನಡೆದಿಲ್ಲ. ರಾಜ್ಯದಲ್ಲಿ ನಾವು ಹಲವಾರು ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ. ಒಂದೇ ಮಾದರಿಯ ಕೊಲೆ ಎಲ್ಲಾ ಕಡೆ ನಡೆಯುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಕುಮ್ಮಕ್ಕೇ ಕಾರಣ’’ ಎಂದು ಆರೋಪಿಸಿದರು

error: Content is protected !!
Scroll to Top