ಇಂದಿನ ಹವಮಾನ ವರದಿ



(ನ್ಯೂಸ್ ಕಡಬ) newskadaba.com, ಡಿ.02: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣವಿತ್ತು.‌ ಅಲ್ಲದೇ ತೀವ್ರ ಚಳಿಯಿಂದ ಹಗಲಲ್ಲೂ ಮೈ ನಡುಗುವ ಸ್ಥಿತಿ ಕಂಡುಬಂದಿತ್ತು. ಇನ್ನು ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆ. ಮತ್ತು 18 ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.







ಇಂದು (ಡಿ.2) ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.






ಡಿ.3ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

error: Content is protected !!
Scroll to Top