ವಿಧಾನಸಭಾ ಚುನಾವಣಾ ಹಿನ್ನೆಲೆ ► ಮೇ 12 ರಂದು ಎಲ್ಲಾ ಸರಕಾರಿ, ಖಾಸಗಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.05. ವಿಧಾನಸಭಾ ಚುನಾವಣೆಯು ಮೇ 12 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಮೇ 12 ರಂದು ಎಲ್ಲಾ ಸರಕಾರಿ, ಖಾಸಗಿ ನೌಕರರಿಗೆ ವೇತನ ಸಹಿತ ರಜೆ ನೀಡುವಂತೆ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ -ಕಾಲೇಜುಗಳಿಗೆ, ಸಂಘ -ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಮೇ 12 ರಂದು ವೇತನ ಸಹಿತ ರಜೆ ಘೋಷಿಸಿದೆ. ಮೇ 15 ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

Also Read  ಪೊಲೀಸರ ನಂತರ ಅರಣ್ಯ ಇಲಾಖೆಗೂ ತಟ್ಟಿದ ಕೊರೋನಾ ಬಿಸಿ ➤ ಕಡಬದ ಇಬ್ಬರು ಸೇರಿದಂತೆ ಉಭಯ ತಾಲೂಕಿನ 9 ಮಂದಿಗೆ ಸೋಂಕು ದೃಢ

error: Content is protected !!
Scroll to Top