(ನ್ಯೂಸ್ ಕಡಬ) newskadaba.com, ಡಿ.09 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ….
ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ ಭಾಗಗಳಲ್ಲಿ ಹೆಚ್ಚಿನ ಚಳಿ ಇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.








