ಮಣಿಪಾಲ ಸಮೀಪದ ಮಂಚಿಯಲ್ಲಿ ಕೋಳಿ ಅಂಕಕ್ಕೆ ದಾಳಿ- 8 ಮಂದಿ ವಶಕ್ಕೆ



(ನ್ಯೂಸ್‌ ಕಡಬ) newskadaba.com, ಡಿ.09 ಮಣಿಪಾಲ: ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.





ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀರ್, ಫಾರೂಕ್ ಅಹಮ್ಮದ್ ಬಂಧಿತ ಆರೋಪಿಗಳು.






ಇವರಿಂದ 6500ರೂ. ಮೌಲ್ಯದ 4 ಕೋಳಿಗಳು, 15 ವಾಹನಗಳು ಹಾಗೂ 22100ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top