(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಹಲವು ಸಂಘ ಪರಿವಾರದ ಮುಖಂಡರನ್ನು ಪೊಲೀಸರು ಬಂಧಿಸಿದರು. ಇಂದು ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದ ಕಾರಣ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಂದೂ ಪರ ಸಂಘಟನೆಗಳ ಸದಸ್ಯರು ನಿಷೇಧಾಜ್ಞೆಯ ನಡುವೆಯೂ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು.