ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್



(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.





ಲಾಲ್​ಬಾಗ್​ಗೆ ವಾಕಿಂಗ್​ ಬರುವವರ ಸಂಖ್ಯೆ ಶೇ.50 ಕುಸಿತ

ಬೆಂಗಳೂರಿನಲ್ಲಿ ಚಳಿಯ ಆರ್ಭಟ ಮುಂದುವರಿದಿದ್ದು, ತಾಪಮಾನ 14 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಬೆಳಗಿನ ವಾಕಿಂಗ್‌ಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದು, ಲಾಲ್‌ಬಾಗ್‌ನಂತಹ ಉದ್ಯಾನವನಗಳಲ್ಲಿ ವಾಯುವಿಹಾರಕ್ಕೆ ಬರುವವರ ಸಂಖ್ಯೆ ಶೇ.50ರಷ್ಟು ಕಡಿಮೆಯಾಗಿದೆ. ಡಿಸೆಂಬರ್ 17ರಿಂದ ಚಳಿ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ವೈದ್ಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದು, ವಿಶೇಷವಾಗಿ ಮಕ್ಕಳು ಹಾಗೂ ಹಿರಿಯರ ಆರೈಕೆಗೆ ಒತ್ತು ನೀಡಬೇಕು ಎಂದು ತಿಳಿಸಿದ್ದಾರೆ. ಬೆಳಗಿನ ವಾಕ್ ಮತ್ತು ವ್ಯಾಯಾಮವನ್ನು ತಾತ್ಕಾಲಿಕವಾಗಿ ತಪ್ಪಿಸಿ, ಬೆಚ್ಚನೆಯ ಉಡುಪು ಧರಿಸಿ ಬಿಸಿ ಆಹಾರ ಸೇವಿಸುವಂತೆ ಸೂಚಿಸಿದ್ದಾರೆ.






ನಿನ್ನೆ ರಾಜ್ಯದಲ್ಲಿ ದಾಖಲಾದ ಕನಿಷ್ಠ ಉಷ್ಣಾಂಶ

ಬಿದರಿನಲ್ಲಿ ಕನಿಷ್ಠ 7.4°C ಉಷ್ಣಾಂಶ ಕಂಡುಬಂದಿದ್ದು, ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಹೊನ್ನಾವರದಲ್ಲಿ ಕನಿಷ್ಠ 19.13°C, ಬೆಂಗಳೂರು ಎಚ್ ಎಎಲ್ ವ್ಯಾಪ್ತಿಯಲ್ಲಿ 13.4°C, ಬೆಂಗಳೂರು ನಗರದಲ್ಲಿ 14.5°C, ಬೆಂಗಳೂರು KAIL AP – 12.9°C, ಹಾಸನದಲ್ಲಿ 8.7°C, ಆಗುಂಬೆಯಲ್ಲಿ 9.3°C, ಧಾರವಾಡದಲ್ಲಿ 9.5°C, ವಿಜಯಪುರದಲ್ಲಿ 10°C, ಹಾಸನದಲ್ಲಿ ಕನಿಷ್ಠ 8.7°C ದಾಖಲಾಗಿದೆ.

 

error: Content is protected !!
Scroll to Top